ಕ್ರಿಯಾಮಥನವಿಲ್ಲದೆ ಕಾಣಬಂದುದೆ ಇಕ್ಷುವಿನೊಳಗಣ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕ್ರಿಯಾಮಥನವಿಲ್ಲದೆ ಕಾಣಬಂದುದೆ ಇಕ್ಷುವಿನೊಳಗಣ ಮಧುರ ? ಕ್ರಿಯಾಮಥನವಿಲ್ಲದೆ ಕಾಣಬಂದುದೆ ತಿಲದೊಳಗಣ ತೈಲ ? ಕ್ರಿಯಾಮಥನವಿಲ್ಲದೆ ಕಾಣಬಂದುದೆ ಕ್ಷೀರದೊಳಗಣ ಘೃತ ? ಕ್ರಿಯಾಮಥನವಿಲ್ಲದೆ ಕಾಣಬಂದುದೆ ಕಾಷ*ದೊಳಗಣ ಅಗ್ನಿ ? ಇದು ಕಾರಣ
ನಮ್ಮ ಗುಹೇಶ್ವರಲಿಂಗವ ತನ್ನೊಳರಿದೆನೆಂಬ ಮಹಂತಂಗೆ ಸತ್‍ಕ್ರಿಯಾಚರಣೆಯೆ ಸಾಧನ ಕಾಣಿಭೋ.