ಗಂಗೆಯ ತಡಿಯಲೊಂದು ಐವಾಗಿಲಪಟ್ಟಣದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಗಂಗೆಯ ತಡಿಯಲೊಂದು ಐವಾಗಿಲಪಟ್ಟಣದ ಕಾಲುವಳ್ಳಿಯಲ್ಲಿ ಹುಟ್ಟಿ ಬೆಳೆದೆ ನಾನು. ತರುವಕ್ಕಳ ಕೂಡಿ ನೀರಾಟವ ಹೊಕ್ಕು
ಉಟ್ಟುವ ಹೋಗಾಡಿಹಳೆಂದು ಬಾಯ ಬಾಯ ಕುಟ್ಟಿ
ಬ್ರಹ್ಮ ಪಾಶವೆಂಬ ಕಿರಿಗೆಯನುಗಿದುಕೊಂಡಳು ನಮ್ಮವ್ವೆ. ಇಂತಪ್ಪ ತಾಯಿತಂದೆಯರ ಕೂಡೆ ಮುನಿದು ಹೋಗಿ
ಗುಹೇಶ್ವರನಲ್ಲಯ್ಯನ ಮೊರೆಹೊಕ್ಕೆ. ಇನ್ನು ಮರಳಿ ಬಂದು ಆ ಕಿರಿಗೆಯನುಟ್ಟೆನಾದಡೆ ನಿಮ್ಮಾಣೆ ನಿಮ್ಮ ಪ್ರಮಥರಾಣೆ.