ಗಂಡ ಶಿವಲಿಂಗದೇವರ ಭಕ್ತ ಹೆಂಡತಿ ಮಾರಿ ಮಸಣಿಯ ಭಕ್ತೆ. ಗಂಡ ಕೊಂಬುದು ಪಾದೋದಕ-ಪ್ರಸಾದ ಹೆಂಡತಿ ಕೊಂಬುದು ಸುರೆ-ಮಾಂಸ. ಭಾಂಡ-ಭಾಜನ ಶುದ್ಧವಿಲ್ಲದವರ ಭಕ್ತಿ ಹೆಂಡದ ಮಡಿಕೆಯ ಹೊರಗೆ ತೊಳೆದಂತೆ ಕೂಡಲಸಂಗಮದೇವಾ. 104