ಗಿಡುವಿನ ಮೇಲಣ ತುಂಬಿ ಕೂಡೆ ವಿಕಸಿತವಾಯಿತ್ತು ತುಂಬಿ ನೋಡಾ ! ಆತುಮ ತುಂಬಿ ತುಂಬಿ ಪರಮಾತುಮ ತುಂಬಿ ತುಂಬಿ ನೋಡಾ! ಗುಹೇಶ್ವರನೆಂಬ ಲಿಂಗಕ್ಕೆ ಎರಗಿ ನಿಬ್ಬೆರಗಾಯಿತ್ತು ತುಂಬಿ ನೋಡಾ !