ಗೀತವ ಹಾಡಿದಡೇನು ಶಾಸ್ತ್ರ-ಪುರಾಣವ ಕೇಳಿದಡೇನು ವೇದವೇದಾಂತವ ನೋಡಿದಡೇನು ಮನವೊಲಿದು ಲಿಂಗಜಂಗಮವ ಪೂಜಿಸಲರಿಯದವರು ಎಲ್ಲರಲ್ಲಿ [ಪ್ರಾ]ಜ್ಞರಾದಡೇನು ಭಕ್ತಿುಲ್ಲದವರನೊಲ್ಲ ಕೂಡಲಸಂಗಮದೇವ. 188