ಗುರುಕಾರುಣ್ಯವಿಡಿದು ಅಂಗದ ಮೇಲೆ ಲಿಂಗವನುಳ್ಳ ನಿಜವೀರಶೈವ ಸಂಪನ್ನರಾದ ಗುರುಚರ ಭಕ್ತಿವಿವಾಹದ ಪರಿಯೆಂತೆಂದಡೆ: ದಾಸಿ
ವೇಸಿ
ವಿಧವೆ
ಪರಸ್ತ್ರೀ
ಬಿಡಸ್ತ್ರೀ ಮೊದಲಾದ ಹಲವು ಪ್ರಕಾರದ ರಾಸಿಕೂಟದ ಸ್ತ್ರೀಯರ ಬಿಟ್ಟು ಸತ್ಯಸದಾಚಾರವನುಳ್ಳ ಭಕ್ತಸ್ತ್ರೀಯರ
ಮುತ್ತೈದೆಯ ಮಗಳಪ್ಪ ಶುದ್ಧ ಕನ್ನಿಕೆಯ
ವಿವಾಹವಾಗುವ ಕಾಲದಲ್ಲಿ
ಭಕ್ತಗೃಹವಂ ಶೃಂಗರಿಸಿ ಭಕ್ತಿಪದಾರ್ಥಂಗ? ಕೂಡಿಸಿ ಭಕ್ತಿ ಸಂಭ್ರಮದಿಂದ ಗುಡಿಕಟ್ಟಿ ವಿವಾಹೋತ್ಸವಕ್ಕೆ ನೆರೆದ ಭಕ್ತಜಂಗಮಕ್ಕೆ ನಮಸ್ಕರಿಸಿ ಮೂರ್ತಿಗೊಳಿಸುತ್ತ ವಿಭೂತಿ ವಿಳಯವಂ ತಂದಿರಿಸಿ ಬಿನ್ನೈಸಿ ಅವರಾಜ್ಞೆಯಂ ಕೈಕೊಂಡು ಶೋಭನವೇಳುತ್ತ
ಮಂಗಳ ಮಜ್ಜನವಂ ಮಾಡಿ ಅಂಗವಸ್ತ್ರ ಲಿಂಗವಸ್ತ್ರಂಗಳಿಂ ಶೃಂಗರಿಸಿ ವಿಭೂತಿಯಂ ಧರಿಸಿ
ರುದ್ರಾಕ್ಷೆಯಂ ತೊಟ್ಟು ದಿವ್ಯಾಭರಣವನ್ನಿಟ್ಟು ಆಸನವಿತ್ತು ಕು?್ಳರಿಸಿ ಭಕ್ತಾಂಗನೆಯರೆಲ್ಲ ನೆರೆದು ಶೋಭನವಂ ಪಾಡುತ್ತ ಭವಿಶೈವಕೃತಕಶಾಸ್ತ್ರವಿಡಿದು ಮಾಡುವ ಪಂಚಸೂತಕ ಪಾತಕಯುಕ್ತವಾದ ಪಂಚಾಂಗ ಕರ್ಮ ಸಂಕಲ್ಪಗಳಂ ಅತಿಗಳೆದು ಅಂಗಲಿಂಗಸಂಬಂಧವನುಳ್ಳ ಪಂಚಾಚಾರಯುಕ್ತರಾದ ನಿಜವೀರಶೈವಸಂಪನ್ನರಾದ ಭಕ್ತಿವಿವಾಹಕ್ಕೆ ಮೊದಲಾದ ಗುರುವಾಜ್ಞೆವಿಡಿದು ಉಭಯವಂ ಕೈಗೂಡಿ ಸತಿಪತಿ ಭಾವವನುಳ್ಳ ಸತ್ಯವ್ರತವ ತಪ್ಪದಿರಿ ಎಂದು. ಭಕ್ತಾಜ್ಞೆಯಲ್ಲಿ ಭಸಿತವನಿಡಿಸಿ ಗುರುಲಿಂಗ ಜಂಗಮವೆಂಬ ಏಕ ಪ್ರಸಾದವನೂಡಿ ಇಂತು ಗುರುಚರ ಪರ ಮೊದಲಾದ ಭಕ್ತಗಣ ಸಾಕ್ಷಿಯಾಗಿ ಭಕ್ತಿವಿವಾಹದ ಭಕ್ತಾರಾಧ್ಯರುಗಳ ನಿಷೇಧವಮಾಡಿ ನಿಂದಿಸಿದವಂಗೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ
ಪ್ರಸಾದವಿಲ್ಲ; ಅವ ಭಕ್ತಾಚಾರಕ್ಕೆ ಸಲ್ಲನು. ಇಂತಪ್ಪ ಭಕ್ತಿ ಕಲ್ಯಾಣಯುಕ್ತವಾದ ಭಕ್ತರಾಧ್ಯರ ನಿಷೇಧವಮಾಡಿ ನಿಂದಿಸಿದವಂಗೆ ಇಪ್ಪತ್ತೆಂಟು ಕೋಟಿ ನರಕ ತಪ್ಪದು ಕಾಣಾ ಕೂಡಲಚೆನ್ನಸಂಗಯ್ಯ.