ಗುರುಕಾರುಣ್ಯವ ವಿಭೂತಿಯ ಪಡೆದು



Pages   (key to Page Status)   


ಗುರುಕಾರುಣ್ಯವ ಪಡೆದು ಅಂಗದ ಮೇಲೆ ಲಿಂಗಧಾರಣವಾಗಿ
ಶ್ರೀ ವಿಭೂತಿಯ ಧರಿಸಿದ ಮಹಾತ್ಮನು ಮುಂದೆ ಶಿವನ ಜ್ಞಾನಚಕ್ಷುವಿನಿಂದುದಯಿಸಿದ ರುದ್ರಾಕ್ಷಿಯ ಧರಿಸುವ ಭೇದವೆಂತೆಂದೊಡ ಃ ಶಿಖಾಸ್ಥಾನದಲ್ಲಿ ಏಕಮುಖವನುಳ್ಳಂಥ ಒಂದು ರುದ್ರಾಕ್ಷಿಯ `` ಓಂ ಸದಾಶಿವಾಯ ನಮ ಃ ಎಂಬ ಮಂತ್ರದಿಂದ ಧಾರಣಮಾಡುವುದು. ಮಸ್ತಕದಲ್ಲಿ ಎರಡುಮುಖ ಮೂರುಮುಖ ಹನ್ನೆರಡುಮುಖಂಗಳನುಳ್ಳಂಥ ಮೂರು ರುದ್ರಾಕ್ಷಿಗಳ `` ಓಂ ವಹ್ನಿಸೂರ್ಯಸೋಮಾಧಿಪಾಯ ಶಿವಾಯ ನಮಃ ಎಂಬ ಮಂತ್ರದಿಂದ ಧಾರಣಮಾಡುವುದು. ಶಿರವ ಬಳಸಿ ಹನ್ನೊಂದುಮುಖಂಗಳನುಳ್ಳಂಥ ಮೂವತ್ತಾರು ರುದ್ರಾಕ್ಷಿಗಳ ``ಓಂ ಷಟ್‍ತ್ರಿಂಶತತ್ತಾ ್ವತ್ಮಕಾಯ ಪರಶಿವಾಯ ನಮಃ ಎಂಬ ಮಂತ್ರದಿಂದ ಧಾರಣಮಾಡುವುದು. ಕರ್ಣಯುಗದಲ್ಲಿ ಐದುಮುಖ ಹತ್ತುಮುಖ ಏಳುಮುಖಂಗಳನುಳ್ಳಂಥ ಒಂದೊಂದು ರುದ್ರಾಕ್ಷಿಯ ``ಓಂ ಸೋಮಾಯ ನಮಃ ಎಂಬ ಮಂತ್ರದಿಂದ ಧಾರಣಮಾಡುವುದು. ಕಂಠಸ್ಥಾನದಲ್ಲಿ ಎಂಟುಮುಖ
ಆರುಮಖಂಗಳನುಳ್ಳಂಥ ಮೂವತ್ತೆರಡು ರುದ್ರಾಕ್ಷಿಗಳ ``ಓಂ ತ್ರಿಯಂಬಕಕಲಾತ್ಮನೇ ಶ್ರೀಕಂಠಾಯ ನಮಃ ಎಂಬ ಮಂತ್ರದಿಂದ ಧಾರಣಮಾಡುವುದು. ಉರಸ್ಥಾನದಲ್ಲಿ ನಾಲ್ಕುಮುಖಂಗಳನುಳ್ಳಂಥ ಐವತ್ತುನಾಲ್ಕು ರುದ್ರಾಕ್ಷಿಗಳ ``ಓಂ ಶ್ರೀಕಂಠಾದಿಮುಕ್ತ್ಯಾತ್ಮಕಾಯ ಶ್ರೀ ಸರ್ವಜ್ಞಾಯ ನಮಃ ಎಂಬ ಮಂತ್ರದಿಂದ ಧಾರಣಮಾಡುವುದು. ಬಾಹುದ್ವಯದಲ್ಲಿ ಹದಿಮೂರುಮುಖಂಗಳನುಳ್ಳಂಥ ಹದಿನಾರು ಹದಿನಾರು ರುದ್ರಾಕ್ಷಿಗಳ ``ಓಂ ಸುಖಾಸನಾದಿ ಷೋಡಶಮೂರ್ತ್ಯಾತ್ಮಕಾಯ ಶ್ರೀಕಂಠಾಯ ನಮಃ ಎಂಬ ಮಂತ್ರದಿಂದ ಬಲದ ತೋಳಿನಲ್ಲಿ ಧಾರಣಮಾಡುವುದು. ``ಓಂ ಸೋಮಕಲಾತ್ಮಕಾಯ ಸೋಮಾಯ ನಮಃ ಎಂಬ ಮಂತ್ರದಿಂದ ಎಡದ ತೋಳಿನಲ್ಲಿ ಧಾರಣಮಾಡುವುದು. ಮುಂಗೈ ಎರಡರಲ್ಲಿ ಒಂಬತ್ತು ಮುಖಂಗಳನುಳ್ಳಂಥ ಹನ್ನೆರಡು ಹನ್ನೆರಡು ರುದ್ರಾಕ್ಷಿಗಳ ``ಓಂ ದ್ವಾದಶಾದಿತ್ಯಾಕ್ಷಾಯ ಶ್ರೀ ಮಹಾದೇವಾಯ ನಮಃ ಎಂಬ ಮಂತ್ರದಿಂದ ಬಲದ ಮುಂಗೈಯಲ್ಲಿ ಧಾರಣಮಾಡುವುದು. ``ಓಂ ಕೇಶವಾದಿತ್ಯಾಯ ಉಮಾಪತಯೇ ನಮಃ ಎಂಬ ಮಂತ್ರದಿಂದ ಎಡದ ಮುಂಗೈಯಲ್ಲಿ ಧಾರಣಮಾಡುವುದು. ಕಕ್ಷಸ್ಥಾನದಲ್ಲಿ ಯಜ್ಞೋಪವೀತರೂಪವಾಗಿ ಹದಿನಾಲ್ಕುಮುಖಂಗಳನುಳ್ಳಂಥ ನೂರೆಂಟು ರುದ್ರಾಕ್ಷಿಗಳ ``ಓಂ ಶತರುದ್ರವಿದ್ಯಾಸ್ವರೂಪಾತ್ಮಕಾಯ ಶ್ರೀ ವಿಶ್ವೇಶ್ವರಾಯ ನಮಃ ಎಂಬ ಮಂತ್ರದಿಂದ ಧಾರಣಮಾಡುವುದು. ಇಂತೀ ಸ್ಥಾನಗಣನೆ ಮುಖಮಂತ್ರಂಗಳ ಭೇದವನರಿದು
ಶ್ರೀ ರುದ್ರಾಕ್ಷಿಯ ಧರಿಸಿದ ಶರಣ ತಾನೇ ಸಾಕ್ಷಾತ್ ಪರಶಿವನಲ್ಲದೆ ಬೇರಲ್ಲವಯ್ಯ. ಅದೆಂತೆಂದೊಡೆ :ಪರಮರಹಸ್ಯದಲ್ಲಿ- ``ಭಾಲೇ ತ್ರೈಪುಂಡ್ರಕಂ ಯಸ್ಯ ಗಲೇ ರುದ್ರಾಕ್ಷಮಾಲಿಕಾ