ಗುರುಮುಖದಿಂದ ಕೊಂಬುದು ಶುದ್ಧಪ್ರಸಾದ.


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಗುರುಮುಖದಿಂದ ಕೊಂಬುದು ಶುದ್ಧಪ್ರಸಾದ. ಲಿಂಗಮುಖದಿಂದ ಕೊಂಬುದು ಸಿದ್ಧಪ್ರಸಾದ. ಜಂಗಮಮುಖದಿಂದ ಕೊಂಬುದು ಪ್ರಸಿದ್ಧಪ್ರಸಾದ. ಜ್ಞಾನಮುಖದಿಂದ ಕೊಂಬುದು ಮಹಾಪ್ರಸಾದ. ಈ ನಾಲ್ಕು ತೆರದಲ್ಲಿ ಕೊಂಬುವುದು ಪ್ರಸಾದವಲ್ಲದೆ ರಣದ ಬೀರರ ಹಾಂಗೆ ಬಾಚಿಸಿಕೊಂಡು ಕೊಂಬಷ್ಟ ಕೊಂಡು
ಬಿಡುವಷ್ಟ ಬಿಟ್ಟು ಸೂರೆಗೂಳಾಗಿ ಚೆಲ್ಲಿಯಾಡುವುದು ಇದಾವ ಪ್ರಸಾದ ಹೇಳ? ಅದೆಂತೆಂದೊಡೆ: ಅಣುಮಾತ್ರ ಪ್ರಸಾದಾನ್ನಂ ತ್ಯಕ್ತ್ವಾ ಭುಕ್ತಾನ್ನ ಕಿಲ್ಬಿಷಂ