ಗುರುವಿಂಗೆ ಗುರುವಾಗಿ ಗುರುಪ್ರಸಾದವ ಕೊಂಬುದು ಲಿಂಗಕ್ಕೆ ಲಿಂಗವಾಗಿ ಲಿಂಗಪ್ರಸಾದವ ಕೊಂಬುದು ಜಂಗಮಕ್ಕೆ ಜಂಗಮವಾಗಿ ಜಂಗಮಪ್ರಸಾದವ ಕೊಂಬುದು ಪ್ರಸಾದಕ್ಕೆ ಪ್ರಸಾದವಾಗಿ ಪ್ರಸಾದವನೆ ಕೊಂಬುದು. ಈ ಚತುರ್ವಿಧಸ್ಥಲಕ್ಕೆ ಚತುರ್ವಿಧವಾಗಬಲ್ಲಡೆ ಕೂಡಲಚೆನ್ನಸಂಗನಲ್ಲಿ ಲಿಂಗೈಕ್ಯವು.