ಗುರುವಿದು ಲಿಂಗವಿದು ಜಂಗಮವಿದು


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಗುರುವಿದು ಲಿಂಗವಿದು ಜಂಗಮವಿದು ಎಂಬ ಭೇದವ ಏಕವ ಮಾಡಿ ನಿನಗೆ ತೋರಿದವರಾರು ಹೇಳಾ ? ಆದಿ ಅನಾದಿಯನು ಒಂದು ಮಾಡುವ
ಭಾವ ನಿರ್ಭಾವವನು ಅರುಹಿದವರಾರು ಹೇಳಾ ? ದೀಕ್ಷೆ ಶಿಕ್ಷೆ ಸ್ವಾನುಭಾವದ ಪರಿಯ ತೋರಿ ನಿಜಪದದಲ್ಲಿ ನಿಲಿಸಿದವರಾದು ಹೇಳಾ ? ಗುಹೇಶ್ವರಲಿಂಗದಲ್ಲಿ ನಿನ್ನ ಆಯತವ ಹೇಳಾ ಮಡಿವಾಳ ಮಾಚಯ್ಯಾ ?