ಗುರುವೊಂದೆ ಬಸಿರು ಲಿಂಗ ಒಂದೆ ಬಸಿರು ಜಂಗಮ ಒಂದೆ ಬಸಿರು ಪ್ರಸಾದ ಒಂದೆ ಬಸಿರು_ ಇದನಾರಯ್ಯಾ ಅಮಳೋಕ್ಯವ ಮಾಡಿ ತೋರಿದವರು ? ಇದನಾರಯ್ಯಾ ಪ್ರಜ್ವಲಿತವ ಮಾಡಿ ಬೇರೆ ತೋರಿದವರು ? ಪೂರ್ವಾಚಾರಿ ಭಕ್ತಿಭಾಂಡಾರಿ ಬಸವಣ್ಣಾ ಎನಗೆ ನೀನು ಗುಹೇಶ್ವರಲಿಂಗವ ತೋರಿದೆಯಾಗಿ ಲೋಕಾದಿಲೋಕವೆಲ್ಲವು ಎನಗೆ ಕಿಂಚಿತ್.