ಗುರುಸತ್ತಡೆ ಸಮಾಧಿಯ ಹೊಗಲೊಲ್ಲರಯ್ಯಾ;



Pages   (key to Page Status)   


ಗುರುಸತ್ತಡೆ ಸಮಾಧಿಯ ಹೊಗಲೊಲ್ಲರಯ್ಯಾ; ಲಿಂಗಬಿದ್ದಡೆ ಸಮಾಧಿಯ ಹೊಕ್ಕಹೆವೆಂಬರು. ಗುರುವಿಂದ ಲಿಂಗವಾಯಿತ್ತೆ ? ಲಿಂಗದಿಂದ ಗುರುವಾದನೊ ? ಅದೆಂತೆಂದಡೆ: ಪೃಥ್ವಿಯಲ್ಲಿ ಹುಟ್ಟಿತ್ತು
ಕಲ್ಲುಕುಟಿಗನಿಂದ ರೂಪಾಯಿತ್ತು
ಗುರುವಿನ ಹಸ್ತದಿಂದ ಲಿಂಗವಾಯಿತ್ತು. ಇಂತೀ ಮೂವರಿಗೆ ಹುಟ್ಟಿದ ಲಿಂಗವ ಕಟ್ಟಿ ಜಗವೆಲ್ಲ ಭಂಡಾಯಿತ್ತು ನೋಡಿರೊ ! ಅಣ್ಣಾ
ಲಿಂಗ ಬಿದ್ದಿತ್ತು ಬಿದ್ದಿತ್ತೆಂದು ನೋಯಲೇಕೆ ? ಬಿದ್ದ ಲಿಂಗವನೆತ್ತಿಕೊಂಡು ಷೋಡಶೋಪಚಾರವ ಮಾಡುವುದು. ಹೀಗಲ್ಲದೆ ಶಸ್ತ್ರಸಮಾಧಿ ದುರ್ಮರಣವ ಮಾಡಿಕೊಂಡಿಹೆನೆಂಬ ಪಂಚಮಹಾಪಾತಕಂಗೆ ನಾಯಕನರಕ. ಲಿಂಗವು ಬೀಳಬಹುದೆ ? ಭೂಮಿಯು ಆನ ಬಲ್ಲುದೆ ? ಸದ್ಗುರುನಾಥನಿಲ್ಲವೆ ? ಇಂತೀ ಕಟ್ಟುವ ತೆರನ
ಮುಟ್ಟುವ ಭೇದವ ಆರು ಬಲ್ಲರೆಂದಡೆ: ಈರೇಳು ಭುವನ
ಹದಿನಾಲ್ಕುಲೋಕದೊಡೆಯ ಪೂರ್ವಾಚಾರಿ ಕೂಡಲಚೆನ್ನಸಂಗಯ್ಯನಲ್ಲದೆ ಮಿಕ್ಕಿನ ಮಾತಿನ ಜ್ಞಾನಿಗಳೆತ್ತ ಬಲ್ಲರು ?