ಗುರು ಗುರುವೆಂದೇನೊ
ಪರಕ್ಕೆ ಹೆಸರ ಹೇಳುವನ್ನಕ್ಕವೆ ? ಲಿಂಗ ಲಿಂಗವೆಂದೇನೊ
ಅಂಗ ಬೀಳುವನ್ನಕ್ಕವೆ ? ಜಂಗಮ ಜಂಗಮವೆಂದೇನೊ
ಧನವ ಸವೆವನ್ನಕ್ಕವೆ ? ಪ್ರಸಾದ ಪ್ರಸಾದವೆಂದೇನೊ
ಉಂಡು ಕಳಚಿ ಪ್ರಳಯಕ್ಕೊಳಗಾಗುವನ್ನಕ್ಕವೆ ? ಪಾದತೀರ್ಥ ಪಾದತೀರ್ಥವೆಂದೇನೊ
ಕೊಂಡು ಕೊಂಡು ಮುಂದೆ ಜಲವ ಮಾಡುವನ್ನಕ್ಕವೆ ? ಅಲ್ಲಿ ನಿಂದಿರದಿರಾ ಮನವೆ ! ನಿಂದಡೆ ನೀನು ಕೆಡುವೆ ಬಂದಡೆ ನಾನು ಕೆಡುವೆ. ಎನ್ನ ತಂದೆ ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣಂಗೆ ಪ್ರಭುದೇವರು ತೋರಿದರೀಯನುವ !