ಗೂಗೆ ಕಣ್ಣ ಕಾಣಲರಿಯದೆ ರವಿಯ ಬಯ್ವುದು. ಕಾಗೆ ಕಣ್ಣ ಕಾಣಲರಿಯದೆ ಶಶಿಯ ಬಯ್ವುದು. ಕುರುಡ ಕಣ್ಣ ಕಾಣಲರಿಯದೆ ಕನ್ನಡಿಯ ಬಯ್ವನು. ಇವರ ಮಾತೆಲ್ಲವು ಸಹಜವೆ ನರಕಸಂಸಾರದಲ್ಲಿ ಹೊದಕುಳಿಗೊಳುತ್ತ ಶಿವನಿಲ್ಲ ಮುಕ್ತಿಯಿಲ್ಲ ಹುಸಿಯೆಂದಡೆ ನರಕದಲ್ಲಿಕ್ಕದೆ ಬಿಡುವನೆ ಚೆನ್ನಮಲ್ಲಿಕಾರ್ಜುನಯ್ಯ