ಘನತರವಾದ ಚಿತ್ರದ ರೂಪ ಬರೆಯಬಹುದಲ್ಲದೆ ಪ್ರಾಣವ ಬರೆಯಬಹುದೆ ಅಯ್ಯಾ? ದಿವ್ಯಾಗಮಂಗಳು ಹೇಳಿದ ಕ್ರೀಯಲ್ಲಿ ದೀಕ್ಷೆಯ ಮಾಡಬಹುದಲ್ಲದೆ ಭಕ್ತಿಯ ಮಾಡಬಹುದೆ ಅಯ್ಯಾ? ಪ್ರಾಣವಹ ಭಕ್ತಿಯ ತನ್ಮಯ ನೀನು. ಈ ಗುಣವುಳ್ಳಲ್ಲಿ ನೀನಿಹೆ ಇಲ್ಲದಲ್ಲಿ ನೀನಿಲ್ಲ ಗುಹೇಶ್ವರಾ.