Pages(key to [[Help:Page Status{{!}}Page Status]])
ಘನವಪ್ಪ ಬೋನವನು ಒಂದು ಅನುವಿನ ಪರಿಯಾಣದಲ್ಲಿ ಹಿಡಿದು ಗುರುಲಿಂಗವಾರೋಗಣೆಯ ಮಾಡಿ ಮಿಕ್ಕುದು ಪ್ರಸಾದ. ಈ ತೆರೆದ ಘನವಪ್ಪ ಲಿಂಗವನು ಒಂದನುವಿನಲ್ಲಿ ತಂದಿರಿಸಿ ಘನವಪ್ಪ ಬೋನವನು ಲಿಂಗವಾರೋಗಣೆಯ ಮಾಡಿ ಮಿಕ್ಕುದ ಕೊಳ್ಳಬಲ್ಲಡೆ ಪ್ರಸಾದಿ._ ಇಂತೀ ತೆರನ ಬೆಸಗೊಳ್ಳಬಲ್ಲಡೆ ಎನ್ನ ಬೆಸಗೊಳ್ಳೈ_ಗುಹೇಶ್ವರಾ.