ಚಂದ್ರಕಾಂತದ ಗಿರಿಗೆ ಉದಕದ ಸಂಚ ಸೂರ್ಯಕಾಂತದ ಗಿರಿಗೆ ಅಗ್ನಿಯ ಸಂಚ ಪರುಷದ ಗಿರಿಗೆ ರಸದ ಸಂಚ. ಬೆರಸುವ ಭೇದವಿನ್ನೆಂತೊ? ಅಪ್ಪುವನು ಅಗ್ನಿಯನು ಪಕ್ವಕ್ಕೆ ತಂದು ಅಟ್ಟುಂಬ ಭೇದವನು ಗುಹೇಶ್ವರ ಬಲ್ಲ.