ಚಂದ್ರಮನೊಳಗಣ ಎರಳೆಯ ನುಂಗಿದ ರಾಹುವಿನ ನೋಟವು ಅಂದಂದಿಗೆ ಬಂದು ಕಾಡಿತ್ತು ನೋಡಾ. ಒಂದರ ತಲೆ ಒಂದರ ಬಸುರು_ಅಂದಂದಿಗೆ ಬಂದು ಕಾಡಿತ್ತು ನೋಡಾ. ನಂದಿ ನಂದಿಯ ನುಂಗಿ ಬಂದುದು ಮಹೀತಳಕ್ಕಾಗಿ ಇಂದು ರವಿಗಡಣವ ನಾನೇನೆಂಬೆ ಗುಹೇಶ್ವರಾ