ಚಿನ್ನದಿಂದಾದ ಬಂಗಾರ ಚಿನ್ನದ ರೂಪಲ್ಲದೆ ಮತ್ತೊಂದು ರೂಪಾಗಬಲ್ಲುದೆ ಹೇಳಾ? ಲಿಂಗಮುಖದಿಂದ ಉದಯವಾದ ಶರಣರು ಲಿಂಗದ ರೂಪಲ್ಲದೆ ಮತ್ತೊಂದು ರೂಪೆಂದೆನಬಹುದೇ? ಎನಲಾಗದು ನೋಡ. ಶಿವನ ಅಂಶವಾದ ಶರಣರಿಗೆ ಮಲಿನಭಾವ ಕಲ್ಪಿಸುವ ಮಹಾಪಾತಕರಿಗೆ ನಾಯಕನರಕ ತಪ್ಪದು ಕಾಣಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.