ಜಂಗಮದಿಂಗಿತಾಕಾರವ ನೋಡಿ ಲಿಂಗವೆಂದರಿದ ಭಕ್ತರು ಮನ ಮನ ಬೆರಸಿದಡೆ ಕೂರ್ಮದ ಶಿಶುವಿನ ಸ್ನೇಹದಂತೆ ಮುನ್ನವೆ ತೆರಹಿಲ್ಲದಿರಬೇಕು ನೋಡಾ. ಬಂದ ಬರವನರಿಯದೆ ನಿಂದ ನಿಲವ ನೋಡದೆ ಕೆಮ್ಮನೆ ಅಹಂಕಾರವ ಹೊತ್ತಿಪ್ಪವರ ನಮ್ಮ ಗುಹೇಶ್ವರಲಿಂಗನು ಒಲ್ಲ ಕಾಣಾ.