ಜಂಗಮವಿಲ್ಲದ ಮಾಟ ಕಂಗಳಿಲ್ಲದ ನೋಟ ಹಿಂಗಿತ್ತು ಶಿವಲೋಕ ಇನ್ನೆಲ್ಲಿಯದಯ್ಯಾ. ಲಿಂಗಕ್ಕೆ ಮಾಡಿದ ಬೋನವ ಸಿಂಬಕ ತಿಂಬಂತೆ ಸಮಯೋಚಿತವನರಿಯದೆ ಉದರವ ಹೊರೆವವರ ನರಕದಲ್ಲಿಕ್ಕದೆ ಮಾಬನೆ ಕೂಡಲಸಂಗಮದೇವ 427