ಜಂಗಮವ ಕೂಡಿಕೊಂಡು ಲಿಂಗಾರ್ಚನೆಯ ಮಾಡುವುದು ಲೇಸಯ್ಯಾ ಭಕ್ತಂಗೆ. ಆ ಭಕ್ತನ ಕೂಡಿಕೊಂಡು ಲಿಂಗಾರ್ಚನೆಯ ಮಾಡುವುದು ಲೇಸಯ್ಯಾ ಜಂಗಮಕ್ಕೆ. ಆ ಜಂಗಮದ ಕರ್ತೃತ್ವವೆ ಭಕ್ತಂಗೆ ದಾಸೋಹ
ಆ ಭಕ್ತನ ಕಿಂಕಲವೆ ಆ ಜಂಗಮಕ್ಕೆ ದಾಸೋಹ. ಆ ಭಕ್ತರೊಳಗೆ ಆ ಜಂಗಮವಡಗಿ
ಆ ಜಂಗಮದೊಳಗೆ ಆ ಭಕ್ತನಡಗಿ
ಇದನೇನೆಂದು ಹವಣಿಸುವೆನಯ್ಯಾ
ಎರಡೊಂದಾದ ಘನವ ? ಇದನೇನೆಂದುಪಮಿಸುವೆನಯ್ಯಾ
ತೆರಹಿಲ್ಲದ ಘನವ ? ಈ ಎರಡಕ್ಕೆ ಭವವಿಲ್ಲೆಂದು ಕೂಡಲಸಂಗಯ್ಯಾ
ನಿಮ್ಮ ಶ್ರುತಿಗಳು ಹೇಳಿದವಾಗಿ
ನಿಮ್ಮ ಕರುಣವೆನಗೆ ಆುತ್ತು. 523