ಜಂಗಮಸ್ಥಲಕ್ಕೆ ಲಕ್ಷಣವಾವುದೆಂದಡೆ ಹೇಳಿಹೆ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಜಂಗಮಸ್ಥಲಕ್ಕೆ ಲಕ್ಷಣವಾವುದೆಂದಡೆ ಹೇಳಿಹೆ ಕೇಳಿರಣ್ಣಾ : ಮೂರರ ಹೊಲಿಗೆಯ ಬಿಚ್ಚಿ ಆರ ಮಾಡಬೇಕು. ಆರರ ತಿರುಳ ತೆಗೆದು ಒಂದರೊಳಗೆ ನಿಲಿಸಬೇಕು
ಐದರ ಮುಸುಕನುಗಿದು
ಐದರ ಕಳೆಯ ಕೆಡಿಸಿ ಐದರ ನಿಲವನಡಗಿಸಿ
ಮೂರರ ಮುದ್ರೆಯನೊಡೆದು ನಾಲ್ಕರೊಳಗೆ ನಿಲ್ಲದೆ
ಮೂರು ಮುಖವು ಒಂದು ಭಾಗವಾಗಿ ಇರಬೇಕು ! ಈ ಭೇದವನರಿಯದೆ ಸುಳಿವರ ಕಂಡು ಬೆರಗಾದೆ ಕಾಣಾ ಗುಹೇಶ್ವರಾ.