ಜಂಬೂದ್ವೀಪದ ವ್ಯವಹಾರಿ ಖಂಡ ಭಂಡವ ತುಂಬಿ ಕುಂಭಿನಿಯುದರದ ಮೇಲೆ ಪಸರವನಿಕ್ಕಿದ. ಉಷ್ಣ ತೃಷ್ಣೆ ಘನವಾಗಿ ಕಡಲೇಳು ಸಮುದ್ರವ ಕುಡಿದು ನೀರಡಿಸಿದಾತ ಅರಲುಗೊಂಡು ಬೆರಗಾದ. ಶಿಶು ತಾಯ ಹೆಣನ ಹೊತ್ತುಕೊಂಡು ಹೆಸರ ಹೇಳುತ್ತೈದಾನೆ ! ಗುಹೇಶ್ವರನೆಂಬ ನಿಲವ ವಸುಧೆಯಾಕೃತಿ ನುಂಗಿತ್ತು.