ಜಂಬೂದ್ವೀಪ ನವಖಂಡ ಪೃಥ್ವಿಯೊಳಗೆ ಕೇಳಿರಯ್ಯಾ ಎರಡಾಳಿನ ಭಾಷೆಯ ಕೊಲುವೆನೆಂಬ ಭಾಷೆ ದೇವನದು ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಹಿಡಿದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವಾ.