ಜಗತ್‍ಸೃಷ್ಟನಹ ಅಜನ ಕೊಂಬು ಮುರಿಯಿತ್ತು. ಧರೆಯ ಚಂದ್ರಸೂರ್ಯರಿಬ್ಬರೂ ನೆಲಕ್ಕೆ ಬಿದ್ದರಲ್ಲಾ ! ಉದಯ ನಿಂದಡೆ ಅಸ್ತಮಾನವಹುದು. ಊರು ಬೆಂದು ಉಲುಹಳಿದುದು. _ಇದೇನು ಸೋಜಿಗವೊ ! ದೇವ ಸತ್ತ ದೇವಿ ಕೆಟ್ಟಳು ಆನು ಬದುಕಿದೆನು ಗುಹೇಶ್ವರಾ.