ಜಗದ ಕರ್ತನ ಕೈಯಲ್ಲಿ ಹಿಡಿದುಕೊಂಡು ಮನೆಮನೆ ತಪ್ಪದೆ ತಿರುಗುವ ತುಡುಗುಣಿಯಂತೆ ಕಾಡಲಾಗದು ಭಕ್ತನ ಬೇಡಲಾಗದು ಭವಿಯ. ಕಾಡಿ ಬೇಡಿ ನೀವು ಒಲಿಸಿಕೊಂಡಡೆ ಬೇಂಟೆಯ ಶ್ವಾನ ಮೊಲಕ್ಕೆ ಬಾಯಿದೆರೆದಂತೆ ಗುಹೇಶ್ವರಾ