ಜಗವನೊಳಕೊಂಡ ಲಿಂಗವು ಸೊಗಸಿಂದೆ ಎನ್ನ ಕರಸ್ಥಲಕ್ಕೆ ಬಂದಿರಲು ಕಂಡು ಹಗರಣವಾಯಿತ್ತೆನಗೆ. ಗುರುಲಿಂಗಜಂಗಮಸ್ವರೂಪವಾಗಿ ಮೂರ್ತಿಗೊಂಡಿತ್ತು ನೋಡಾ. ಆಹಾ ಎನ್ನ ಪುಣ್ಯವೇ ! ಆಹಾ ಎನ್ನ ಭಾಗ್ಯವೇ ! ಆಹಾ ಅಖಂಡೇಶ್ವರಾ ನಿಮ್ಮ ಘನವ ಕಂಡು ಎನ್ನ ಮನಕ್ಕೆ ಮಂಗಳವಾಯಿತ್ತು ನೋಡಾ.