ಜಲ ಕೂರ್ಮ ಗಜ ಫಣಿಯ ಮೇಲೆ ಧರೆ ವಿಸ್ತರಿಸಿ ನಿಲ್ಲದಂದು
ಗಗನವಿಲ್ಲದಂದು ಪವನನ ಸುಳುಹು ಇಲ್ಲದಂದು
ಅಗ್ನಿಗೆ ಕಳೆ ಮೊಳೆದೋರದಂದು
ತರು ಗಿರಿ ತೃಣಕಾಷಾ*ದಿಗಳಿಲ್ಲದಂದು
ಯುಗಜುಗ ಮಿಗಿಲೆನಿಸಿದ ಹದಿನಾಲ್ಕು ಭುವನ ನೆಲೆಗೊಳ್ಳದಂದು
ನಿಜವನರಿದಿಹೆನೆಂಬ ತ್ರಿಜಗಾಧಿಪತಿಗಳಿಲ್ಲದಂದು_ ತೋರುವ ಬೀರುವ ಪರಿ ಇಲ್ಲದಂದು
ಆ ಭಾವದಲ್ಲಿ ಭರಿತ ಅಗಮ್ಯ ಗುಹೇಶ್ವರ ನಿರಾಳವು !