ಜಿಹ್ವೆಯ ಮುಖದಿಂದುಂಡು ಗುಹ್ಯದ್ವಾರದಿಂ ಬಿಡುವನೆ ಯೋಗಿ ? ಅಲ್ಲ ನಿಲ್ಲು. ಶುಕ್ಲ ಶೋಣಿತಮಲದೇಹಿಯಲ್ಲ_ ಇಬ್ಬಟ್ಟೆಯಂ ಕಟ್ಟಿದ ಮಹಾಯೋಗಿ ! ಮೇಲಿಪ್ಪ ಕೈಲಾಸವ ಮರ್ತ್ಯಕ್ಕೆ ತಂದು ನಿಲಿಸಿದ ಸರಿಯಿಲ್ಲದ ಪ್ರತಿಯಿಲ್ಲದ ಗುಹೇಶ್ವರ ಸಿದ್ಧರಾಮಯ್ಯದೇವರು ತಾನೆ.