ಜ್ಞಾತೃವೆ ಅರಸುವುದು ಜ್ಞಾನವೆ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಜ್ಞಾತೃವೆ ಅರಸುವುದು ಜ್ಞಾನವೆ ಅರಿವುದು. ಜ್ಞೇಯವೆ ನಿಶ್ಚಯಿಸುವುದು. ಈ ಜ್ಞಾತೃ ಜ್ಞಾನ ಜ್ಞೇಯವೆಂಬ ತ್ರಿವಿಧಸಾಧನದಿಂದ ಲಿಂಗವನರಸಿ ಲಿಂಗವನರಿದು ಲಿಂಗವ ಬೆರಸಿ ಲಿಂಗವಾದ ಮತ್ತೆ
ಜ್ಞಾತೃ ಜ್ಞಾನ ಜ್ಞೇಯವೆಂಬ ತ್ರಿವಿಧಭ್ರಾಂತಿಸೂತಕ ಹೋಯಿತ್ತು ನಿಜವಾಯಿತ್ತು ಕಾಣಾ ಗುಹೇಶ್ವರಾ