ಜ್ಞಾನದ ಉಬ್ಬು ಕೊಬ್ಬಿನಲ್ಲಿ ನುಡಿವುತ್ತಿಪ್ಪರೆಲ್ಲರ (ಉಲಿವುತ್ತಿಪ್ಪರೆಲ್ಲರ ?); ನಾಮ ನಾಸ್ತಿಯಾಗದು ತನುಗುಣ ನಾಸ್ತಿಯಾಗದು ಕರಣಾದಿಗುಣಂಗಳು ನಾಸ್ತಿಯಾಗವು ಕರಸ್ಥಲವು ನಾಸ್ತಿಯಾಗದು. ಇದೆತ್ತಣ ಉಲುಹೊ ಗುಹೇಶ್ವರಾ ?