ಜ್ಞಾನ ಉಪಾಸ್ಥೆಪಶುಜ್ಞಾನವ ಬಲ್ಲ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಜ್ಞಾನ ಉಪಾಸ್ಥೆಪಶುಜ್ಞಾನವ ಬಲ್ಲ ಮಾತ ನುಡಿಯಲಾಗದು
ಉತ್ಪತ್ತಿ ಸ್ಥಿತಿ ಲಯವೆಂಬ ಕಾಲತ್ರಯದಲ್ಲಿ ಬೀಳದೆ
ಜಾಗ್ರತ ಸ್ವಪ್ನ ಸುಷುಪ್ತಿಯೆಂಬ ವ್ಯಾಪಾರತ್ರಯದ ಅನುಮಾನವರಿತು
ಆಧ್ಯಾತ್ಮಿಕ ಆಧಿಭೌತಿಕ ಆಧಿದೈವಿಕವೆಂಬ ತಾಪತ್ರಯವಂ ಕೊಳಲಾಗದೆ
ಅರ್ಥೇಷಣ ಪುತ್ರೇಷಣ ದಾರೇಷಣವೆಂಬ ಈಷಣತ್ರಯದ ಭ್ರಾಂತಿಯಡಗಿ
ಅಭಾವ ಸ್ವಭಾವ ನಿರ್ಭಾವದಲ್ಲಿ ಶುದ್ಧವಾಗಿ
ದೀಕ್ಷೆ ಶಿಕ್ಷೆ ಸ್ವಾನುಭಾವವೆಂಬ ದೀಕ್ಷಾತ್ರಯದಲ್ಲಿ ಅನುಮಾನವನ್ನರಿತು
ಇಷ್ಟಲಿಂಗ ಪ್ರಾಣಲಿಂಗ ತೃಪ್ತಿಲಿಂಗವೆಂಬ ಲಿಂಗತ್ರಯದ ಭೇದವಂ ಭೇದಿಸಿ
ಶುದ್ಧ ಸಿದ್ಧ ಪ್ರಸಿದ್ಧವೆಂಬ ಪ್ರಸಾದತ್ರಯವಂ ಭೇದಿಸಿ
ಸ್ವರ್ಗಮತ್ರ್ಯ ಪಾತಾಳವೆಂಬ ಲೋಕತ್ರಯವನತಿಗಳದು
ಇಹ ಪರ ಸ್ವಯವೆಂಬ ಮುಕ್ತಿತ್ರಯದ ಹಂಗು ಹಿಂಗಿ
ಮಥನ ನಿರ್ಮಥನ ಸಮ್ಮಥನವೆಂಬ ಮಥನತ್ರಯದಲ್ಲಿ ನಿರತನಾಗಿ
ರಾಜಸ ತಾಮಸ ಸಾತ್ವಿಕವೆಂಬ ಗುಣತ್ರಯದ ಹಮ್ಮ ಬಿಟ್ಟು
ವಿಶ್ವ ತೈಜಸ ಪ್ರಾಜ್ಞವೆಂಬ ಜೀವತ್ರಯವನೊರಸಲೀಯದೆ
ಆಣವಮಲ ಮಾಯಾಮಲ ಕಾರ್ಮಿಕಮಲವೆಂಬ ಮಲತ್ರಯಂಗಳಂ ನಿರ್ಮಲವಂ ಮಾಡಿ
ಗುರುನಿಂದೆ ಶಿವನಿಂದೆ ಭಕ್ತನಿಂದೆಯೆಂಬ ನಿಂದಾತ್ರಯಂಗಳಂ ಕೇಳದೆ
ಚಂದ್ರ ಸೂರ್ಯ ಅಗ್ನಿ ಎಂಬ ನೇತ್ರತ್ರಯದ ಹೊಲಬನರಿದು
ಪ್ರಾಹ್ನ ಮಧ್ಯಾಹ್ನ ಅಪರಾಹ್ನವೆಂಬ ವೇಳಾತ್ರಯವಂ ಮೀರಿ
ಉದರಾಗ್ನಿ ಶೋಕಾಗ್ನಿ ಕಾಮಾಗ್ನಿ ಎಂಬ ಅಗ್ನಿತ್ರಯಕ್ಕೆ ಇಂಬುಗೊಡದೆ
ಅಧೋನಿರಾಳ ಮಧ್ಯನಿರಾಳ ಊಧ್ರ್ವನಿರಾಳವೆಂಬ ನಿರಾಳತ್ರಯದಲ್ಲಿ ನಿರತನಾಗಿ
ಅನುಭಾವ ಮಹಾನುಭಾವ ಸ್ವಾನುಭಾವವೆಂಬ ಅನುಭಾವತ್ರಯಂಗ?ಲ್ಲಿ ಬೀಸರಹೊಂದದೆ
ಬಾಲ್ಯ ಯೌವನ ವೃದ್ಧಾಪ್ಯವೆಂಬ ತನುತ್ರಯಂ ಮರೆದು
ತನು ಮನ ಧನದಲ್ಲಿ ಶುದ್ಧನಾಗಿ
ಆಗಮತ್ರಯದಲ್ಲಿ ಅನುವರಿತು
ಇಂತೀ ತ್ರಯ ಸಂಪಾದನೆಯಂ ಮೀರಿದ ನಿಜಶರಣನೆ ಕೂಡಲಚೆನ್ನಸಂಗಯ್ಯನೆಂದರಿದು ಸುಖಿಯಾದೆ£ಯ