ಡಾ. ಪ್ರಕಾಶ ಗ. ಖಾಡೆ

ಡಾ. ಪ್ರಕಾಶ ಗಣಪತಿ ಖಾಡೆ ಅವರು ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ 10-06-1965 ರಂದು ಜನಿಸಿದರು. ಓದಿದ್ದು ತೊದಲಬಾಗಿ, ಕೆರೂರ (ಬದಾಮಿ), ಇಳಕಲ್ಲ ಹಾಗೂ ಧಾರವಾಡಗಳಲ್ಲಿ, ಕನ್ನಡದಲ್ಲಿ ಎಂ.ಎ.ಪ್ರಥಮ ದರ್ಜೆಯಲ್ಲಿ ಪಾಸಾಗಿ 2005ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ "ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ" ಮಹಾ ಪ್ರಬಂಧಕ್ಕೆ ಪಿಎಚ್.ಡಿ. ಪದವಿ ಪಡೆದರು. ಬೈಲಹೊಂಗಲ,ಚಂದರಗಿ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ,ಬಾಗಲಕೋಟ ಸಕ್ರಿ ಪತ್ರಿಕೋದ್ಯಮ ವಿಭಾಗ ಮತ್ತು ಇಳಕಲ್ಲ ವಿಜಯ ಚಿತ್ರಕಲಾ ಸ್ನಾತಕೋತ್ತರ ಕಾಲೇಜು ವಿಭಾಗದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ.ಸಾಹಿತ್ಯ, ಪತ್ರಿಕೋದ್ಯಮ, ರಂಗಭೂಮಿ, ಜಾನಪದ, ಶಿಕ್ಷಣ, ಸಂಶೋಧನೆ ಹಾಗೂ ಸಂಘಟನೆ ಕ್ಷೇತ್ರದಲ್ಲಿ ಸದಾ ಕ್ರಿಯಾಶೀಲ ವ್ಯಕ್ತಿತ್ವ, ಕನ್ನಡದ ಪ್ರಮುಖ ಪತ್ರಿಕೆಗಳಲ್ಲ್ಲಿ, ಆಕಾಶವಾಣಿ, ದೂರದರ್ಶನಗಳಲ್ಲಿ ನಿರಂತರವಾಗಿ ಲೇಖನ, ಕವಿತೆ, ಕಥೆ, ವಿಮರ್ಶೆ ಪ್ರಕಟ ಮತ್ತು ಪ್ರಸಾರ. ಈವರೆಗೆ ಗೀತ ಚಿಗಿತ, ಪ್ರೀತಿ ಬಟ್ಟಲು, ತೂಕದವರು, ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ, ಕೃಷ್ಣಾ ತೀರದ ಜನಪದ ಒಗಟುಗಳು, ಮುನ್ನುಡಿ ತೋರಣ, ಜತ್ತಿ ಕಾವ್ಯಾಭಿವಂದನ, ನೆಲಮೂಲ ಸಂಸ್ಕøತಿ, ಕನ್ನಡ ಪತ್ರಿಕೆ ಮತ್ತು ಸಾಹಿತ್ಯ, ಜಾನಪದ ಕೋಗಿಲೆ ಗೌರಮ್ಮ ಚಲವಾದಿ, ಸಾಹಿತ್ಯ ಸಂಗತಿ ,ಮೌನ ಓದಿನ ಬೆಡಗು ಸೇರಿದಂತೆ 21 ಕೃತಿಗಳು ಪ್ರಕಟ. ಮುಧೋಳ,ಶಿವಮೊಗ್ಗ ಮತ್ತು ವಿಜಾಪುರಗಳಲ್ಲಿ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಕೇರಳದಲ್ಲಿ ಜರುಗಿದ ಕನ್ನಡ ಸಮ್ಮೇಳನದಲ್ಲಿ ಪ್ರಬಂಧ ಮಂಡನೆ. ಉತ್ತಮ ವಾಗ್ಮಿ, ಅಪರೂಪದ ಶಿಕ್ಷಣ ಚಿಂತಕ ಡಾ. ಪ್ರಕಾಶ ಖಾಡೆ ಬಾಗಲಕೋಟ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕನ್ನಡ ಜಾನಪದ ವಿದ್ವಾಂಸ ಸಾಲಿನಲ್ಲಿ ಡಾ.ಖಾಡೆ ಅವರದು ಎದ್ದು ತೋರುವ ಹೆಸರು.ಅವರ ‘ಜಾನಪದ ಹೆಬ್ಬಾಗಿಲು’ ಕೃತಿಯು ಜಾನಪದ ಅಧ್ಯಯನಾಸಕ್ತರಿಗೆ ಆಕರ ಗ್ರಂಥವಾಗಿದೆ. ವಿಳಾಸ: ಡಾ. ಪ್ರಕಾಶ. ಗ. ಖಾಡೆ ‘ಶ್ರೀಗುರು’ ಸರಸ್ವತಿ ಬಡಾವಣೆ, ಸೆಕ್ಟರ್ ನಂ.63, ನವನಗರ, ಬಾಗಲಕೋಟ ಮೊ: 9845500890