ತನುವಿನಲ್ಲಿ ಗುರು ಭರಿತವಾದುದೇ


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ತನುವಿನಲ್ಲಿ ಗುರು ಭರಿತವಾದುದೇ ಭರಿತಬೋನ. ಮನದಲ್ಲಿ ಲಿಂಗ ಭರಿತವಾದುದೇ ಭರಿತಬೋನ. ಧನದಲ್ಲಿ ಜಂಗಮ ಭರಿತವಾದುದೇ ಭರಿಬೋನ. ಪ್ರಾಣದಲ್ಲಿ ಪ್ರಸಾದ ಭರಿತವಾದುದೇ ಭರಿತಬೋನ. ಅಂತರಂಗ ಬಹಿರಂಗದಲ್ಲಿ ಪರಿಪೂರ್ಣವಸ್ತು ಭರಿತವಾಗಿ ಎಡೆ ಕಡೆಯಿಲ್ಲದ ವಸ್ತುವಿನಲ್ಲಿ ತಾ ಭರಿತವಾದುದೇ ಭರಿತಬೋನ. ಹೀಂಗಲ್ಲದೆ: ಪುರುಷಾಹಾರಪ್ರಮಾಣಿನಿಂದ ಓಗರವ ಗಡಣಿಸಿಕೊಂಡು ಲಿಂಗಾರ್ಪಿತಮಾಡಿ ಪ್ರಸಾದವೆಂದು ಕೊಂಡು ಎಂಜಲುಯೆಂದು ಕಳೆದು ಬಂದ ಪದಾರ್ಥವ ಮುಟ್ಟಿ ಲಿಂಗಾರ್ಪಿತವ ಮಾಡಲಮ್ಮದವರಿಗೆ ಲಿಂಗಾರ್ಪಿತವಿಲ್ಲ. ಲಿಂಗಾರ್ಪಿತವಿಲ್ಲವಾಗಿ ಪ್ರಸಾದವಿಲ್ಲ. ಪ್ರಸಾದವಿಲ್ಲವಾಗಿ ಮುಕ್ತಿಯೆಂಬುದು ಇಲ್ಲ. ಇವರ ಲಿಂಗಾಂಗಸಂಬಂಧಿಗಳೆಂತೆಂಬೆನಯ್ಯ? ಲಿಂಗಾಂಗಿಯ ಅಂಗದಲ್ಲಿ ಸಂದೇಹ ಸೂತಕ ಉಂಟೇ? ಈ ಭಂಗಿತರ ಮುಖವ ನೋಡಲಾಗದು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.