ತನುವಿನಲ್ಲಿ ತನು ಸವೆಯದು ಮನದಲ್ಲಿ ಮನ ಸವೆಯದು ಧನದಲ್ಲಿ ಧನ ಸವೆಯದು. ಭಕ್ತಿಯುಕ್ತಿಯ ಮಾತು ನಿನಗೇಕೆ ಹೇಳಾ ಬಸವಾ ? ಮಾಟಕೂಟವೆಂಬ ಕೀರ್ತಿವಾರ್ತೆಗೆ ಸಿಲುಕಿ ಜಂಗಮವೆ ಲಿಂಗವೆಂಬುದ ಮರೆದೆಯೆಲ್ಲಾ ಬಸವಣ್ಣಾ ! ಗುಹೇಶ್ವರನ ಶರಣರಿಗೆ ತ್ರಿಕರಣವನೊಪ್ಪಿಸಿದಲ್ಲದೆ ಭಕ್ತನಾಗಬಾರದು ಕಾಣಾ ಸಂಗನಬಸವಣ್ಣಾ.