ತನುವ ಗೆಲಲರಿಯದೆ ಮನವ ಗೆಲಲರಿಯದೆ ಧನವ ಗೆಲಲರಿಯದೆ ಭ್ರಮೆಗೊಂಡಿತ್ತು ಲೋಕವೆಲ್ಲವು. ತನುವ ದಾಸೋಹಕ್ಕೆ ಸವೆಸಿ ಮನವ ಲಿಂಗಧ್ಯಾನದಲ್ಲಿ ಸವೆಸಿ ಧನವ ಜಂಗಮದಲ್ಲಿ ಸವೆಸಿ ಗೆಲಬಲ್ಲಡೆ ಸಂಗನಬಸವಣ್ಣನಲ್ಲದೆ ಮತ್ತಾರನು ಕಾಣೆ. ಗುಹೇಶ್ವರಾ_ನಿಮ್ಮ ಶರಣ ಸಂಗನಬಸವಣ್ಣಂಗೆ ನಮೋ ನಮೋ ಎನುತಿರ್ದೆನು.