ತನು ಉಂಟೆಂದಡೆ ಪಾಶಬದ್ಧ
ಮನ ಉಂಟೆಂದಡೆ ಭವಕ್ಕೆ ಬೀಜ. ಅರಿವ ನುಡಿದು ಕೆಟ್ಟೆನೆಂದರೆ ಅದೇ ಅಜ್ಞಾನ. ಭಾವದಲ್ಲಿ ಸಿಲುಕಿದೆನೆಂಬ ಮಾತು ಬಯಲ ಭ್ರಮೆ ನೋಡಾ. ಒಮ್ಮೆ ಕಂಡೆ
ಒಮ್ಮೆ ಕಾಣೆ
ಒಮ್ಮೆ ಕೂಡಿದೆ
ಒಮ್ಮೆ ಅಗಲಿದೆ ಎಂದಡೆ ಕರ್ಮ ಬೆಂಬತ್ತಿ ಬಿಡದು. ನಿನ್ನೊಳಗೆ ನೀ ತಿಳಿದುನೋಡಲು ಭಿನ್ನವುಂಟೆ ? ಗುಹೇಶ್ವರಲಿಂಗವನರಿವಡೆ ನೀನೆಂದೇ ತಿಳಿದು ನೋಡಾ ಮರುಳೆ ?