ತನು ತರತರಂಬೋಗಿ ಮನವು ನಿಮ್ಮಲ್ಲಿ ಸಿಲುಕಿತ್ತಯ್ಯಾ. ನೋಟವೇ ಪ್ರಾಣವಾಗಿ ಅಪ್ಯಾಯನ ನಿಮ್ಮಲ್ಲಿ ಆರತುದಯ್ಯಾ. ಸಿಲುಕಿತ್ತು ಶೂನ್ಯದೊಳಗೆ ಗುಹೇಶ್ವರಾ ನಿರಾಳವಯ್ಯಾ !