Pages   (key to Page Status)   


ತನು ನಿಮ್ಮ ಪೂಜಿಸುವ ಕೃಪೆಗೆ ಸಂದುದು. ಮನ ನಿಮ್ಮ ನೆನೆವ ಧ್ಯಾನಕ್ಕೆ ಸಂದುದು. ಪ್ರಾಣ ನಿಮ್ಮ ನೆರೆವ ರತಿಸುಖಕ್ಕೆ ಸಂದುದು_ ಇಂತು
ತನು ಮನ ಪ್ರಾಣ ನಿಮಗೆ ಸಂದಿಪ್ಪ ನಿಸ್ಸಂಗಿಯಾದ ನಿಚ್ಚಟ
-ನಿಜಲಿಂಗೈಕ್ಯ ಕಾಣಾ ಗುಹೇಶ್ವರಾ.