ತನ್ನಂಗದ ಮೇಲೆ ಶಿವಲಿಂಗವಿದ್ದು


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ತನ್ನಂಗದ ಮೇಲೆ ಶಿವಲಿಂಗವಿದ್ದು ಸತ್ಕಿ ್ರಯಾಮುಖದಿಂದ ಲಿಂಗಾರ್ಪಿತವ ಮಾಡಿ ಆ ಲಿಂಗ ಪ್ರಸಾದವ ಕೊಂಬುದೆ ಶಿವಾಚಾರಪದ ನೋಡಾ! ಆ ಸದ್ಭಕ್ತನಲ್ಲಿ ಶಿವನಿಪ್ಪನು. ಹೀಂಗಲ್ಲದೆ
ಅಂತರಂಗದಲ್ಲಿ ಆತ್ಮಲಿಂಗವುಂಟೆಂದು ಮನ ಭಾವಂಗಳಿಂದರ್ಪಿತವೆಂದು ಇಷ್ಟಲಿಂಗಾರ್ಪಣವಿಲ್ಲದ ಕರಕಷ್ಟಂಗೆ ಅವನಿಗೆ ಆವ ಸತ್ಯವು ಇಲ್ಲ; ಆವ ಸದಾಚಾರವು ಇಲ್ಲ; ಶಿವಜ್ಞಾನವೆಂಬುದು ಮುನ್ನವೆ ಇಲ್ಲ. ಶಿವಲಿಂಗಾರ್ಪಣಹೀನವಾಗಿ ಕೊಂಬುದು ಅದು ಶಿವಜ್ಞಾನವೆ? ಇಂತಪ್ಪ ಅಜ್ಞಾನಿ ಹೊಲೆಯರ ಎನಗೊಮ್ಮೆ ತೋರದಿರಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.