ತಪ್ಪ ಹೊರಿಸಿ ಹೊರಟೆಹೆನೆಂಬುದು ಸತ್ಯವೆ ? ತನು ಸೀರೆಯನುಳಿದು ನಿರ್ವಾಣವಾದಲ್ಲಿ ಮನದ ಭ್ರಾಂತು ನಿಶ್ಚಯವಾಗದು ! ಕೇಶವೆಂಬ ಸೀರೆ ಅಂಗಕ್ಕೆ ಮರೆಯಾಯಿತ್ತು. ಅಪಮಾನವೆಂತು ಹರಿಯಿತ್ತು ? ಅದು ಗುಹೇಶ್ವರಲಿಂಗಕ್ಕೆ ಸಲ್ಲದ ವೇಷ !