ತಲೆಯಿಲ್ಲದ ಮೃಗ ಒಡಲಿಲ್ಲದೆ ಆಹಾರವ ಕೊಂಡಿತ್ತು ಹೆಜ್ಜೆ ಇಲ್ಲದೆ ಹರಿಯಿತ್ತು ! ಅದ ಶುದ್ಧಿಯ ಮಾಡ ಹೋದಾತನಿನ್ನೂ ಮರಳನು. ವೆಜ್ಜವಿಲ್ಲದ ಮಣಿಯ ದಾರವಿಲ್ಲದೆ ಪವಣಿಸುವ ನಿಮ್ಮ ಶರಣನ ಪರಿಯ ನೋಡಾ ಗುಹೇಶ್ವರಾ !