ತಾಯಿಗಾದ ಸುಖದುಃಖಂಗಳು ಬಸಿರ ಶಿಶುವಿಂಗೆ ನೋಡಯ್ಯಾ. ಶಿವಶರಣರಿಗೆ ಮಾಡಿದ ಸುಖದುಃಖಗಳು ಶಿವನ ತಾಗುವುವು. ಕರಣವುಳ್ಳವರು ಮರಣವಿಲ್ಲದವಂಗೆ ಮುಳಿದಡೆ ತನುವುಳ್ಳವರ ಮುಟ್ಟುವುದಲ್ಲದೆ ಒಡಲಿಲ್ಲದಾತನ ಮುಟ್ಟಬಲ್ಲುದೆ ? ಗುಹೇಶ್ವರಾ ಕೆಂಡವ ಒರಲೆ ಮುಟ್ಟಬಲ್ಲುದೆ ?