ತಾಯಿಯಿಲ್ಲದ ಶಿಶುವಿಂಗೆ
ಶಿಶುವಿಲ್ಲದ ತಾಯಿ ಮೊಲೆಯನೂಡಿದಳು. ಮೊಲೆವಾಲನುಂಡ ಶಿಶು ತಾಯ ತಕ್ಕೈಸಿದಡೆ ತಾಯಿ ಆ ಶಿಶುವಿಂಗೆ ಸತಿಯಾದಳಲ್ಲಾ ! ಸತಿಯ ಸಂಗದ ಸುಖವ ಪತಿಯಿಲ್ಲ (ಯಿಂ?)ದರಿದಲ್ಲಿ ಸತಿ ಪತಿ ಎಂಬೆರಡೂ ಅಳಿಯಿತ್ತು ನೋಡಾ ! ಈ ನಿಜದ ನಿರ್ಣಯವ ಎನಗೆ ತೋರಿದ ಗುಹೇಶ್ವರನ ಶರಣ ಮಡಿವಳ ಮಾಚಿತಂದೆಗಳ ಪಾದಕ್ಕೆ ನಮೋ ನಮೋ ಎನುತಿರ್ದೆನು.