ತೋಟವ ಬಿತ್ತಿದರೆಮ್ಮವರು ಕಾಹ ಕೊಟ್ಟವರು ಜವನವರು. ನಿತ್ಯವಲ್ಲದ ಸಂಸಾರ ವೃಥಾ ಹೋಯಿತಲ್ಲಾ ! ಗುಹೇಶ್ವರನಿಕ್ಕಿದ ಕಿಚ್ಚು ಹೊತ್ತಿಕ್ಕಲುಂಟು ಅಟ್ಟುಣಲಿಲ್ಲ ಗುಹೇಶ್ವರಾ.