ತ್ರಿಪುರವನುರುಹಿದ ತ್ರಿಣೇತ್ರನಲ್ಲ ಅಂಧಕಾಸುರನ ಮೆಟ್ಟಿ ನಾಟ್ಯವನಾಡಿದಾತನಲ್ಲ ಖಂಡಕಪಾಲಿಯಲ್ಲ ಮುಂಡಧಾರಿಯಲ್ಲ ಮಂಡಲದೊಳಗೆ ಬಂದು ಸುಳಿವಾತನಲ್ಲ ಈಶ್ವರನಲ್ಲ ಮಹೇಶ್ವರನಲ್ಲ ಗುಹೇಶ್ವರನೆಂಬ ಲಿಂಗ ಅಪಾರ ಮಹಿಮನು.