ದಂದುಗ ಬಿಡದು ಮನದ ಸಂದೇಹ ಹಿಂಗದಾಗಿ : ಮುಂದೆ ಲಿಂಗವ ಕಂಡೆಹೆನೆಂಬುದು ಹುಸಿ ನೋಡಾ. ಬೆಂದ ಕರಣಾದಿಗಳು ಒಂದೆ ಪಥವನರಿಯವು ಎಂತು ಶಿವಪಥವೆನಗೆ ಸಾಧ್ಯವಪ್ಪುದಯ್ಯಾ ಎನ್ನ ತಂದೆ ಕೂಡಲಸಂಗಮದೇವಾ ನಿಮ್ಮ ಶರಣರ ಬಳಿವಿಡಿದಡೆ ಎನ್ನ ದಂದುಗ ಹಿಂಗುವುದು. 37