Title vachana saahitya
Author Akka Mahaadevi
Year 1130-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ದೃಶ್ಯವಾದ ರವಿಯ ಬೆಳಗು
ಆಕಾಶದ ವಿಸ್ತೀರ್ಣ
ವಾಯುವಿನ ಚಲನೆ
ತರುಗುಲ್ಮ ಲತಾದಿಗಳಲ್ಲಿಯ ತಳಿರು ಪುಷ್ಪ ಷಡುವರ್ಣಂಗಳೆಲ್ಲ ಹಗಲಿನ ಪೂಜೆ. ಚಂದ್ರಪ್ರಕಾಶ ನಕ್ಷತ್ರ ಅಗ್ನಿ ವಿದ್ಯುತ್ತಾದಿಗಳು ದೀಪ್ತಮಯವೆನಿಸಿಪ್ಪವೆಲ್ಲ ಇರುಳಿನ ಪೂಜೆ. ಹಗಲಿರುಳು ನಿನ್ನ ಪೂಜೆಯಲ್ಲಿ ಎನ್ನ ಮರೆದಿಪ್ಪೆನಯ್ಯಾ ಚೆನ್ನಮಲ್ಲಿಕಾರ್ಜುನಾ.