ದೇವಲೋಕದ ದೇವಗಣಂಗಳೆಲ್ಲ ಎನ್ನ ಹೊರಗೆಂಬರು; ಅದು ದಿಟವೆ. ಸತ್ಯ ಸಾತ್ವಿಕ ಸದ್ಭಕ್ತರು ಎನ್ನ ಹೊರಗೆಂಬರು; ಅದು ದಿಟವೆ. ಹದಿನಾಲ್ಕು ಭವನದೊಳಗೆ ಅವರು ತಾವಿರಲಿ ನಾ ನಿಮ್ಮೊಳಗು ಗುಹೇಶ್ವರಾ.